• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪರಿಶಿಷ್ಟ ಜಾತಿ, ವರ್ಗಗಳ ಜನರ ಸಮಸ್ಯೆಗಳ ಪರಿಹಾರಕ್ಕೆ ಆಯೋಗದಿಂದ ಕಟ್ಟುನಿಟ್ಟಿನ ಕ್ರಮ

      @voiceofjanata

      April 29, 2026
      0
      ಪರಿಶಿಷ್ಟ ಜಾತಿ, ವರ್ಗಗಳ ಜನರ ಸಮಸ್ಯೆಗಳ ಪರಿಹಾರಕ್ಕೆ ಆಯೋಗದಿಂದ ಕಟ್ಟುನಿಟ್ಟಿನ ಕ್ರಮ
      0
      SHARES
      28
      VIEWS
      Share on FacebookShare on TwitterShare on whatsappShare on telegramShare on Mail

      ಪರಿಶಿಷ್ಟ ಜಾತಿ, ವರ್ಗಗಳ ಜನರ ಸಮಸ್ಯೆಗಳ ಪರಿಹಾರಕ್ಕೆ ಆಯೋಗದಿಂದ ಕಟ್ಟುನಿಟ್ಟಿನ ಕ್ರಮ

      ಕರ್ನಾಟಕ ರಾಜ್ಯ ಅನುಸೂಚಿತ ‌ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ.ಎಲ್ ಭರವಸೆ

      ವಿಜಯಪುರ, ಏ. 28 : ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳಿಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಅನೇಕ ಸಮಸ್ಯೆಗಳಿದ್ದು ಅಂತಹ ಸಮಸ್ಯೆಗಳನ್ನು ಆಯೋಗವು ಗಂಭೀರವಾಗಿ ಆಲಿಸಿ ಅವುಗಳಿಗೆ ಪರಿಹಾರ ಒದಗಿಸಲು ಕಟ್ಟು ನಿಟ್ಟಿನ ಕ್ರಮ‌ ಕೈಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ಅನುಸೂಚಿತ ‌ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ.ಎಲ್ ಅವರು ಹೇಳಿದರು.

      ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಕುಂದು‌ ಕೊರತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ಭೂವ್ಯಾಜ್ಯ, ಅಟ್ರಾಸಿಟಿ, ನಕಲಿ ಜಾತಿ ಪ್ರಮಾಣ‌ ಪತ್ರ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪರಿಗಣಿಸಲು ಅಧಿಕಾರಿಗಳು ಆಯೋಗದ ಜೊತೆಗೂಡಿ ಸರಿಪಡಿಸಬೇಕು. ಈ ಕಾರ್ಯವನ್ನು ರಾಜ್ಯಾದ್ಯಾಂತ ಚುರುಕುಗೊಳಿಸಲಾಗುವುದು ಎಂದರು.

      ಪ್ರಕರಣಗಳ ವಿಳಂಬಕ್ಕೆ ಕಾರಣ ಸಂಪೂರ್ಣ ಅವಲೋಕನ ಮಾಡಿಕೊಂಡು ಸಮತೋಲನ ವಹಿಸಿ ಫಲಾನುಭವಿಗಳಿಗೆ ನ್ಯಾಯ ಕಲ್ಪಿಸಬೇಕು ಎಂದರು.‌ ಈಗಾಗಲೇ
      3850 ಪ್ರಕರಣಗಳ ಕಾರ್ಯ ನಡೆದಿದೆ. 4500 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದ ಅವರು, ಕಳೆದ ಆರು ತಿಂಗಳಿಂದ ಪ್ರತಿ ಗುರುವಾರ ಹಾಗೂ ಶುಕ್ರವಾರ ಆಲಿಸಿ, 300 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ‌ಇತ್ಯರ್ಥಪಡಿಸಲಾಗಿದೆ ಎಂದರು.

      ಒಟ್ಟಾರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಮಸ್ಯೆಗಳನ್ನು ಆಲಿಸಿ ಆ ಸಮಸ್ಯೆಗಳನ್ನು ಶಾಶ್ವತ ಪರಿಹಾರ ಕಲ್ಪಿಸುವ ಕಾರ್ಯವನ್ನು ಆಯೋಗದಿಂದ ಮಾಡಲು ಪ್ರಯತ್ನಿಸಲಾಗುವುದು ಎಂದರು.

      ಸರ್ಕಾರದಿಂದ‌ ಬರುವಂತಹ ಸೌಲಭ್ಯಗಳು ಈ ವರ್ಗದವರಿಗೆ ದೊರಕಿಸುವ ನಿಟ್ಟಿನಲ್ಲಿ ಆಯೋಗ ಕೆಲಸ ಮಾಡುತ್ತಿದೆ. ಆಯೋಗದ ಈ ಕಾರ್ಯಕ್ಕೆ ಆಯಾ ಜಿಲ್ಲೆಗಳ ಅಧಿಕಾರಿಗಳು ಕೈ ಜೋಡಿಸಬೇಕು ಎಂದರು.

      ಇಂದಿನ ಸಭೆಯಲ್ಲಿ ಸ್ವೀಕರಿಸಲಾದ ದೂರು, ನ್ಯೂನತೆಗಳನ್ನು ಆಯೋಗ ಗಂಭೀರವಾಗಿ ಪರಿಗಣಿಸಿ ಅವುಗಳಿಗೆ ತ್ವರಿತ ಪರಿಹಾರ ಕಲ್ಪಿಸಲಾಗುವುದು. ಅಲ್ಲದೇ ವಿವಿಧ ಜಿಲ್ಲೆಗಳಲ್ಲಿ ಆಲಿಸಿದ ಹಾಗೂ ಸ್ವೀಕರಿಸಲಾದ ಅಹವಾಲುಗಳ ಕುರಿತ ವರದಿಯನ್ನು ಮುಖ್ಯಮಂತ್ರಿಗಳಿಗೆ ಶೀಘ್ರದಲ್ಲಿಯೇ ಸಲ್ಲಿಸಲಾಗುವುದು ಎಂದು ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ.ಎಲ್. ತಿಳಿಸಿದರು.

      ಸಮಾಜ ಮುಖಂಡ ಅಭಿಷೇಕ ಚಕ್ರವರ್ತಿ ಮಾತನಾಡಿ, ಭೂ ಒಡೆತನ, ಹೆಚ್ಚುವರಿ ಜಮೀನು ಸಮಸ್ಯೆಗಳಿವೆ. ಮುಗ್ಧ ಜನರು ಜಮೀನು ಕಳೆದುಕೊಂಡ ಪ್ರಕರಣಗಳಿವೆ.‌ ಅಂತಹ ಪ್ರಕರಣಗಳನ್ನು ಆಯೋಗ ಗಂಭೀರವಾಗಿ ಪರಿಗಣಿಸಿ, ಆ ಪ್ರಕರಣಗಳಿಗೆ ನ್ಯಾಯ ಕಲ್ಪಿಸಬೇಕು ಎಂದು ಆಯೋಗದ ಅಧ್ಯಕ್ಷರನ್ನು ಕೋರಿದರು.
      ಅಸ್ಪ್ರಶ್ಯತೆ ನಿವಾರಣೆಗೆ ಸಾಕಷ್ಟು ಜಾಗೃತಿ ಮೂಡಿಸಬೇಕು. ಅದಕ್ಕೆ ವಿಶೇಷ ಮುತುವರ್ಜಿ ವಹಿಸಬೇಕು. ಈ ವರ್ಗದವರಿಗಿರುವ ಸೌಲಭ್ಯ ದೊರಕಿಸಿಕೊಡಬೇಕು. ಈ ಜನಾಂಗದ ಅಭಿವೃದ್ಧಿ ಹಾಗೂ ಸಮಸ್ಯೆಗಳನ್ನು ಕಾನೂನು ರೀತ್ಯ ಇತ್ಯರ್ಥಪಡಿಸಬೇಕು ಎಂದೂ ಆಗ್ರಹಿಸಿದರು. ಎಸ್ ಸಿಪಿ‌ಟಿ ಎಸ್ ಪಿ ಯೋಜನೆ ಸಮರ್ಪಕ ಅನುಷ್ಠಾನಗೊಳ್ಳಬೇಕು ಎಂದರು.‌

      ರಾಜಶೇಖರ ಕೂಚಬಾಳ ಮಾತನಾಡಿ,ಪೌರ ಕಾರ್ಮಿಕರಿಗೆ ಸಮರ್ಪಕ ವೇತನ ನೀಡಲು ಕ್ರಮ ವಹಿಸಬೇಕು.
      ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು,ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದರು.

      ಸಂಜು ಕಂಬಾಗಿ ಮಾತನಾಡಿ, ಗಾಂವಠಾಣ ಜಾಗದಲ್ಲಿ ನಿರ್ಮಾಣ ಮಾಡಿಕೊಂಡಿದ್ದು, ಅನುಕೂಲ ಮಾಡಿಕೊಡಬೇಕು ಎಂಬ ಮನವಿಗೆ
      ಆಯೋಗದಿಂದ ನ್ಯಾಯ ಕೊಡಿಸುವ ಭರವಸೆಯನ್ನು ಅಧ್ಯಕ್ಷರು ನೀಡಿದರು.

      ರಾವುತ್ ತಳಕೇರಿ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪುವಂತೆ ನೋಡಿಕೊಳ್ಳಬೇಕು. ಎಸ್ ಸಿಪಿ ಟಿಎಸ್ ಪಿ ಹಾಸ್ಟೆಲ್ ಅಧಿಕಾರಿಗಳ ನಿರ್ಲಕ್ಷ್ಯ ವಹಿಸದೇ ನಿಗಾ ವಹಿಸಬೇಕು. ಮೆನು ಚಾರ್ಟ್ ಪ್ರಕಾರ ಆಹಾರ ವಿತರಣೆ, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಯೋಜನೆ ತಲುಪಲಿ, ವಸತಿ ನಿಲಯಗಳಲ್ಲಿ ಸಿಬ್ಬಂದಿ ಸರಿಯಾಗಿ ನಿಗಾ ವಹಿಸುವಂತೆ ನೋಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ ಬೆಳಕು ಚೆಲ್ಲಬೇಕು ಎಂದರು.

      ಪ್ರಕಾಶ ಗುಡಿಮನಿ ಮಾತನಾಡಿ, ತಾಪಂ ಸ್ಥಳೀಯ ಸಂಸ್ಥೆಗಳಿಗೆ ಅನುದಾನದ ಸದ್ಭಳಕೆಯಾಗಲಿ.
      ಸಮುದಾಯ ಎದುರಿಸುವ ಕೆಲವು ಅನ್ಯಾಯ ತಡೆಗಟ್ಟಬೇಕು ಎಂದರು.

      ಮಳಸಿದ್ದ ಲಕ್ಷ್ಮಣ ನಾಯ್ಕೋಡಿ ಮಾತನಾಡಿ, ನಕಲಿ ಜಾತಿ ಪ್ರಮಾಣ ಪತ್ರದ ಉಪಟಳಕ್ಕೆ ಬ್ರೇಕ್ ಹಾಕಬೇಕು ಎಂದರು.

      ರಮೇಶ ಆಸಂಗಿ ಮಾತನಾಡಿ, ದೌರ್ಜನ್ಯ ಪ್ರಕರಣಗಳಲ್ಲಿ ನ್ಯಾಯ ದೊರಕಿಸಿ ಕೊಟ್ಟು ಜಿಲ್ಲಾಡಳಿತ ಸ್ಪಂದಿಸಿದೆ ಎಂದು ಎಸ್ ಪಿ ಹಾಗೂ ಡಿಸಿ ಅವರನ್ನು ಪ್ರಶಂಸಿದರು.

      ಭೀಮರಾಯ ಜಿಗಜಿಣಗಿ ಮಾತನಾಡಿ, ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುವವರಿಗೆ ಪೌರ ಕಾರ್ಮಿಕರ ಪರಿಸ್ಥಿತಿ ಗಂಭೀರವಾಗಿದೆ. ಹಾಗಾಗಿ ಪೌರ ಕಾರ್ಮಿಕರಿಗೆ ಸಮರ್ಪಕ
      ವೇತನ ಒದಗಿಸಿಕೊಡುವ ನಿಟ್ಟಿನಲ್ಲಿ ಆಯೋಗಕ್ಕೆ ಕೋರಿದರು.

      ಶ್ರೀನಾಥ ಪೂಜಾರಿ ಯಗಳು ಅವ್ಯವಸ್ಥೆಯನ್ನು ಸರಿಪಡಿಸಿ ಅಲ್ಲಿ ಸಮರ್ಪಕ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು.

      ನಾಗಪ್ಪ ವಡ್ಡರ ಮಾತನಾಡಿ, ಸರ್ಕಾರದ‌ ಮಾರ್ಗಸೂಚಿಗಳನ್ವಯ ಜಾತಿ‌ ಪ್ರಮಾಣ‌ ಪತ್ರ ನೀಡಲಿಕ್ಕೆ ಆಯೋಗ ಗಂಭೀರ ಕ್ರಮ‌ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಂತೆಯೇ ಆಯೋಗದ ಅಧ್ಯಕ್ಷರಾದ ಮೂರ್ತಿ ಮಧ್ಯ ಪ್ರವೇಶಿಸಿ, ನಕಲಿ ಜಾತಿ‌ ಪ್ರಮಾಣ ಪತ್ರದ ವಿರುದ್ಧ ಆಯೋಗ ನಿರ್ದಾಕ್ಷ್ಯಣ್ಯ ಕ್ರಮ ತೆಗೆದುಕೊಳ್ಳುತ್ತಿದೆ ಎಂದರು.‌

      ಸಿದ್ದು ರಾಯಣ್ಣವರ ಮಾತನಾಡಿ, ಸ್ಮಶಾನ ಜಾಗೆ ಕಬ್ಜಾ ಮಾಡಿಕೊಡುವ ಬಗ್ಗೆ ಗಮನಸೆಳೆದರು. ಬಡವರಿಗೆ ಸೂರು ಒದಗಿಸಿಕೊಡುವ ಬಗ್ಗೆ,

      ದೇವಾನಂದ ಲಚ್ಯಾಣ ಮಾತನಾಡಿ, ಅಲೆಮಾರಿ ಸಮುದಾಯ ದೌರ್ಜನ್ಯ ಸಮಿತಿಗೆ ನಾಮ‌ನಿರ್ದೇಶನ ಸದಸ್ಯರಾಗಿ ನೇಮಕ ಮಾಡಿ, ಅಲೆ ಮಾರಿ ಜನರಿಗೆ ನಿವೇಶನ ಒದಗಿಸುವುದು. ಇಂಡಿಯಲ್ಲಿ ಈ ಸಮುದಾಯಕ್ಕೆ ಜಾಗ ಒದಗಿಸಿರುವ ಜಿಲ್ಲಾಧಿಕಾರಿಗಳ ಕಾರ್ಯವನ್ನು ಬಣ್ಣಿಸಿದರು. ಸರ್ಕಾರದ ಯೋಜನೆಗಳಿಗೆ ಅಲೆಮಾರಿ‌ ಸಮುದಾಯಗಳಿಗೆ ತಲುಪವಂತೆ ಮನವಿ ಮಾಡಿದರು.‌

      ಚೆನ್ನು ಕಟ್ಟಿಮನಿ ಮಾತನಾಡಿ, ಪೌರ‌ ಕಾರ್ಮಿಕರ ಸಮಸ್ಯೆಗಳನ್ನು ಜೇಷ್ಠತಾ ಪಟ್ಟಿಯಲ್ಲಿ ಪರಿಹರಿಸಬೇಕು ಎಂದು ಒತ್ತಾಯಿಸಿದರು.

      ಪರಸುರಾಮ ರೋಣಿಹಾಳ,
      ಮಾತನಾಡಿ, ನಿಗಮಗಳಿಗೆ ಇರುವ ಅನುದಾನ ಸದ್ಭಳಕೆ ಮಾಡುವ ಮೂಲಕ ಅರ್ಹರಿಗೆ ಯೋಜನೆಗಳನ್ನು ತಲುಪಿಸಬೇಕು ಎಂದರು.‌

      ರಾಜಪಾಲ ಚವ್ಹಾಣ ಮಾತನಾಡಿ, ಎಸ್ ಸಿ ಕಾಲೊನಿಗಳಿಗೆ ತಾಂಡಾಗಳಿಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದರು.

      ಸರ್ಕಾರದ ಗಮನ ಸೆಳೆದು‌ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ
      ಸಭೆಯಲ್ಲಿ ಪಜಾ, ಪಪಂ ಗೆ ಸಂಬಂಧಿಸಿದಂತೆ ಅನೇಕ ಸಮಸ್ಯೆಗಳನ್ನು ಆಯೋಗದ ಗಮನಕ್ಕೆ ತಂದಿದ್ದೀರಿ.‌ ಗೋಮಾಳ ಜಮೀನು, ಅಸ್ಪೃಶ್ಯತೆ ನಿವಾರಣೆ, ಕಾರ್ಮಿಕರ ವೇತನ, ವಸತಿ ನಿಲಯಗಳ ನಿರ್ವಹಣೆ, ಮನೆ ನಿರ್ಮಾಣ, ಪೌರ ಕಾರ್ಮಿಕರ ಸರಿಯಾದ ವೇತನ‌ ಪಾವತಿ ಸೇರಿದಂತೆ ಅನೇಕ ಅರ್ಜಿಗಳನ್ನು ಸ್ವೀಕರಿಸಿದ್ದು ಆಯೋಗ ಸ್ಪಂದಿಸಲಿದೆ ಎಂದು ಆಯೋಗದ ಅಧ್ಯಕ್ಷರಾದ ಡಾ.‌ಮೂರ್ತಿ ಭರವಸೆ ನೀಡಿದರು.

      ಸರ್ಕಾರದ ಆದೇಶಗಳ ಪಾಲನೆ, ಎಸ್ ಸಿಪಿ- ಟಿ ಎಸ್ ಪಿ, ಅನುದಾನ ಬಳಕೆ, ಜೇಷ್ಠತೆ ನಿರ್ವಹಣೆ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಅಧ್ಯಕ್ಷರು ಭರವಸೆ ನೀಡಿದರು.‌

      ಅಲೆಮಾರಿ ಸಮುದಾಯ ದೌರ್ಜನ್ಯ ಸಮಿತಿಯಲ್ಲಿ‌ ಪ್ರಾತಿನಿಧಿತ್ವ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು ಕಾನೂನಡಿ‌ ಕ್ರಮ‌ಕೈಗೊಳ್ಳಲಾಗುವುದು. ಸ್ಮಶಾನ ಭೂಮಿ, ಕಂದಾಯ ಗ್ರಾಮ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಒಟ್ಟಾರೆ ಸಭೆಯಲ್ಲಿ ಆಲಿಸಲಾದ ಅಹವಾಲುಗಳನ್ನು ಆಯೋಗ ಸರ್ಕಾರದ ಗಮನ ಸೆಳೆಯಲಿದೆ ಎಂದು ಅಧ್ಯಕ್ಷರಾದ ಮೂರ್ತಿ ಭರವಸೆ ನೀಡಿದರು.‌

      ಸಭೆಯಲ್ಲಿ ಆಯೋಗದ ಸದಸ್ಯರಾದ ಸುನೀಲ ಉಕ್ಕಲಿ, ಎನ್‌ ದಿವಾಕರ್ ಹಾಗೂ ಶ್ರೀಮತಿ ಗೀತಾ ಥಾವಂಶಿ, ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ‌ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ, ಕಾರ್ಯದರ್ಶಿಗಳಾದ ಎಚ್. ಎಂ. ಶಿವರಾಂ, ಸಂಶೋಧನಾ ಅಧಿಕಾರಿ ಸಿಂದೂ ಎಚ್.ಎಸ್., ಬಿ.ಜೆ. ಇಂಡಿ ಸೇರಿದಂತೆ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು‌ ಮುಖಂಡರು ಉಪಸ್ಥಿತರಿದ್ದರು.

      Tags: #DC vijayapur#fans#indi / vijayapur#latsest nesw#Public News#State News#Strict action by the Commission to resolve the problems of people belonging to Scheduled Castes and Scheduled Tribes#Today News#treand news#Voice Of Janata#ಪರಿಶಿಷ್ಟ ಜಾತಿvijayapurವರ್ಗಗಳ ಜನರ ಸಮಸ್ಯೆಗಳ ಪರಿಹಾರಕ್ಕೆ ಆಯೋಗದಿಂದ ಕಟ್ಟುನಿಟ್ಟಿನ ಕ್ರಮ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.