ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು
ಇಂಡಿ | ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಕೋರಿ ಸೋಮವಾರ ಬೆಳಿಗ್ಗೆ 10 ಘಂಟೆಗೆ ತಹಶಿಲ್ದಾರ ಮುಖಾಂತರ ಮನವಿ ಸಲ್ಲಿಸಲಾಗುವುದು ಎಂದು ಯುವ ಅಲ್ಪಸಂಖ್ಯಾತ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.
ಶನಿವಾರ ಇಂಡಿ ನಗರದಲ್ಲಿ ಮಾಹಿತಿ ನೀಡಿದ ಅವರು, ಯೂತ್ ಮೈನಾರಿಟಿ ಡೆವಲಪ್‌ಮೆಂಟ್ ಕಮಿಟಿಯ ಪದಾಧಿಕಾರಿಗಳಾದ ಹಾಗೂ ಸದಸ್ಯರೊಂದಿಗೆ ಮನವಿಯನ್ನು ತಹಶಿಲ್ದಾರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದೆವೆ.
ಸೋಮವಾರ ಬೆಳಿಗ್ಗೆ ಡಾ. ಬಿ ಆರ್ ಅಂಬೇಡ್ಕರ್ ವೃತ್ ದ ಮೂಲಕ ಸಾಗಿ ಬಸವೇಶ್ವರ ವೃತ್ತಕ್ಕೆ ಆಗಿಮಿಸಿ ಆ ನಂತರ ಆ ತಾಲೂಕು ಆಡಳಿತ ಸೌಧದಲ್ಲಿ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತೆವೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪದಾಧಿಕಾರಿಗಳು ಹಾಗೂ ಆಸಕ್ತರು ಆಗಮಿಸಲು ಮನವಿ ಮಾಡಿಕೊಳ್ಳುತ್ತೆನೆ.


















