ಕ್ಷೇತ್ರದ ಅಭಿವೃದ್ಧಿಗಾಗಿ ಎಂ. ವೈ. ಪಾಟೀಲರಿಗೆ ಸಚಿವ ಸ್ಥಾನ ನೀಡಿ: ಶಶಿಕಾಂತ
ಅಫಜಲಪುರ : ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಅಫಜಲಪುರ ಕ್ಷೇತ್ರದ ಶಾಸಕ ಎಂ. ವೈ. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಯುವ ಮುಖಂಡ ಶಶಿಕಾಂತ ಚವಾಣ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿರುವ ಎಂ. ವೈ. ಪಾಟೀಲ ಅವರು ಸತತ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದು, ತಮ್ಮ ರಾಜಕೀಯ ಜೀವನದುದ್ದಕ್ಕೂ ಜನಸೇವೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ತಿಳಿಸಿದ್ದಾರೆ.
ಅಫಜಲಪುರ ಕ್ಷೇತ್ರದಲ್ಲಿ ಶಿಕ್ಷಣ, ಕುಡಿಯುವ ನೀರು, ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅವರು ವಿಶೇಷ ಒತ್ತು ನೀಡಿದ್ದು, ರೈತರು, ವಿದ್ಯಾರ್ಥಿಗಳು ಹಾಗೂ ಯುವಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಜನನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಅವರ ಅನುಭವ ಮತ್ತು ಸೇವೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದರೆ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಹೇಳಿದ್ದಾರೆ.
ರಾಜ್ಯದ ನೂತನ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಎಂ. ವೈ. ಪಾಟೀಲ ಅವರ ಸೇವೆಯನ್ನು ಗುರುತಿಸಿ ಸಚಿವ ಸ್ಥಾನ ನೀಡುವ ಮೂಲಕ ಅಫಜಲಪುರ ಕ್ಷೇತ್ರದ ಜನರ ಆಶಯವನ್ನು ಈಡೇರಿಸಬೇಕು ಎಂದು ಶಶಿಕಾಂತ ಚವಾಣ ಮನವಿ ಮಾಡಿದ್ದಾರೆ.

















