ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ
Voiceofjanata DESK NEWS : ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದುಂದಿದೆ.
ಎಸ್ ಜಾನಕಿ ಅವರು ಮೈಸೂರಿನಲ್ಲಿ ವಾಸವಿದ್ದರು, ಅವರ ಆರೋಗ್ಯವನ್ನು ನವೀನ್ ಎಂಬ ಕೇರ್ ಟೇಕರ್ ನೋಡಿಕೊಳ್ಳುತ್ತಿದ್ದರು. ಇಂದು ಸಂಜೆ ಅವರಿಗೆ ಇದ್ದಕ್ಕಿದ್ದಂತೆ ಹೃದಯಾಘಾತ ಆಗಿದ್ದು, ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು, ಆದರೆ ಅವರು ಚಿಕಿತ್ಸೆಗೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೇ ಎಂಬ ಗ್ರಾಮದಲ್ಲಿ ಜನಿಸಿದ ಎಸ್. ಜಾನಕಿ, ತಮ್ಮ ಮೂರನೆಯ ವಯಸ್ಸಿನಲ್ಲೇ ನಾದಸ್ವರ ವಿದ್ವಾನ್ ಶ್ರೀ ಪೈದಿಸ್ವಾಮಿ ಎಂಬವರಲ್ಲಿ ಸಂಗೀತಾಭ್ಯಾಸವನ್ನು ಪ್ರಾರಂಭಿಸಿದರು.

















