ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ
ಇಂಡಿ: ತಾಲೂಕಿನ ಚವಡಿಹಾಳ ಗ್ರಾಮದ ಭಾಗ್ಯವಂತಿ ವಿದ್ಯಾವರ್ಧಕ ಸಂಘ (ರಿ), ಚವಡಿಹಾಳ, ವತಿಯಿಂದ ಆಗಸ್ಟ್ ೫ರಂದು ಬೆಳಿಗ್ಗೆ ೧೦.೩೦ ಘಂಟೆಗೆ ನಗರದ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿರುವ ಗುರುಭವನದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶಾಂತಪ್ಪ ದಶವಂತ ವಹಿಸಲಿದ್ದು, ಉದ್ಘಾಟನೆಯನ್ನು ಕಂದಾಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ನೆರವೇರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ತಹಸೀಲ್ದಾರ ನಾಗೇಂದ್ರ ಕೋಳಶೆಟ್ಟಿ, ತಾಲೂಕ ಪಂಚಾಯತ್ ಇಓ ಮಹಾದೇವಪ್ಪ ಏವೂರ, ಕ್ಷೇತ್ರಶಿಕ್ಷಣಾಧಿಕಾರಿ ಮೋಹನ್‌ಕುಮಾರ ಪಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ರಾವೂರ, ಬ್ಲಾಕ್ ಕಾಂಗ್ರೇಸ ಅಧ್ಯಕ್ಷ ಶಿವಯೋಗೆಪ್ಪ ಚನಗೊಂಡ, ಬಿಜೆಪಿ ಮಂಡಲ ಅಧ್ಯಕ್ಷ ಹಣಮಂತರಾಯಗೌಡ ಪಾಟೀಲ, ಬಿ.ಡಿ.ಪಾಟೀಲ ಭಾಗವಹಿಸಲಿದ್ದು, ಸಿ.ಎಂ.ಬಂಡಗರ ಅವರು ಪತ್ರಿಕೆಗಳ ಪಾತ್ರ ಹಾಗೂ ಪತ್ರಕರ್ತರ ಕುರಿತಂತೆ ಉಪನ್ಯಾಸ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಪತ್ರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಪತ್ರಕರ್ತರನ್ನು ವಿದ್ಯಾವರ್ದಕ ಸಂಘದಿAದ ಸನ್ಮಾನಿಸಲಾಗುವುದು. ಕಾರ್ಯಕ್ರಮಕ್ಕೆ ಪತ್ರಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಭಾಗ್ಯವಂತಿ ವಿದ್ಯಾವರ್ಧಕ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
















