• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      Voiceofjanata.in

      August 7, 2026
      0
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ
      0
      SHARES
      1
      VIEWS
      Share on FacebookShare on TwitterShare on whatsappShare on telegramShare on Mail

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂಡಿ: ಗ್ರಾಮೀಣ ಪ್ರದೇಶದ ಜನರನ್ನು ಆರ್ಥಿಕವಾಗಿ ಸ್ವಾವಲಂಬನೆಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ ನೀಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಾಹದೇವಪ್ಪ ಏವೂರ ಹೇಳಿದರು.

      ಗುರುವಾರ ತಾಲೂಕಿನ ಇಂಗಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾವಿನಹಳ್ಳಿ ಗ್ರಾಮದ ಮರಗಾ ಲಕ್ಷ್ಮಿ ದೇವಸ್ಥಾನ ಆವರಣದಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಚಟುವಟಿಕೆ ಅಡಿ ಮಹಿಳಾ ಸ್ವಸಹಾಯ ಗುಂಪುಗಳಿಗೆ ಹಾಗೂ ಕಾಯಕ ಬಂಧುಗಳು, ಅಕುಶಲ ಕೂಲಿಕಾರರಿಗೆ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.

      ಗ್ರಾಮೀಣ ಕೂಲಿ ಕಾರ್ಮಿಕರು ಉದ್ಯೋಗಕ್ಕಾಗಿ ನಗರಗಳಿಗೆ ವಲಸೆ ಹೋಗುವ ಅಗತ್ಯವಿಲ್ಲ. ಗ್ರಾಮ ಪಂಚಾಯಿತಿಗಳಲ್ಲಿ ಜಾರಿಯಲ್ಲಿರುವ ವಿಬಿ-ಜಿ ರಾಮ್‌ಜಿ ಯೋಜನೆ ಅಡಿಯಲ್ಲಿ ಸ್ಥಳೀಯ ಮಟ್ಟದಲ್ಲೇ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ಆಸಕ್ತರು ಗ್ರಾಮ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸಿ ಯೋಜನೆಯ ಸೌಲಭ್ಯ ಪಡೆಯಬೇಕು ಎಂದು ತಿಳಿಸಿದರು.
      ಈ ಯೋಜನೆ ಕೇವಲ ಉದ್ಯೋಗವಷ್ಟೇ ಅಲ್ಲದೆ ಗ್ರಾಮೀಣ ಭಾಗದಲ್ಲಿ ಬಾಳಿಕೆ ಬರುವ ಮೂಲಸೌಕರ್ಯಗಳ ನಿರ್ಮಾಣಕ್ಕೂ ಆದ್ಯತೆ ನೀಡಲಾಗಿದೆ. ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ಅನುಮೋದಿತ ಕಾಮಗಾರಿಗಳಲ್ಲಿ ಕೂಲಿಕಾರರು ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.

      ಯೋಜನೆಯಡಿ ಜಾನುವಾರು ಶೆಡ್, ಎರೆಹುಳು ತೊಟ್ಟಿ, ತೋಟಗಾರಿಕೆ ವಿಸ್ತರಣೆ, ತೆರೆದ ಬಾವಿ, ಕೃಷಿ ಹೊಂಡ (ಫಾರ್ಮ್ ಪಾಂಡ್) ಸೇರಿದಂತೆ ವಿವಿಧ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಬಹುದು. ಸಮುದಾಯ ಕಾಮಗಾರಿಗಳಲ್ಲಿ ಬರ ನಿಯಂತ್ರಣ ಕಾಮಗಾರಿ, ಮಣ್ಣಿನ ಚೆಕ್ ಡ್ಯಾಂ, ಮುಖ್ಯ ಕಾಲುವೆ, ಪ್ರವಾಹ ತಿರುವು ಚರಂಡಿ, ಜಲ ಕೊಯ್ಲು ಹೊಂಡ, ಸಮುದಾಯ ಮೆಟ್ಟಿಲು ಬಾವಿ ಪುನಶ್ಚೇತನ, ನೀರಾವರಿ ಬಾವಿ, ಸರ್ಕಾರಿ ಶಾಲೆಗಳ ಕಂಪೌAಡ್ ಗೋಡೆ, ಅಡುಗೆ ಕೋಣೆ, ಶೌಚಾಲಯ ನಿರ್ಮಾಣ ಹಾಗೂ ಆಟದ ಮೈದಾನ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಲ್ಲಿ ಉದ್ಯೋಗ ಪಡೆಯುವ ಅವಕಾಶವಿದೆ ಎಂದು ಹೇಳಿದರು.

      ತಾಪಂ ಸಹಾಯಕ ನಿರ್ದೇಶಕ ಗ್ರಾಮೀಣ ಉದ್ಯೋಗದ ಸಂಜಯ ಖಡೆಗೆಕರ್ ಮಾತನಾಡಿ, ಜುಲೈ ೧ ರಿಂದ ನರೇಗಾ ಯೋಜನೆ ಬದಲಾಗಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮೀಷನ್ ಗ್ರಾಮೀಣ ಕಾಯ್ದೆ ೨೦೨೫ ಯೋಜನೆ ಜಾರಿಗೆ ಬಂದಿರುವ ಕುರಿತು ತಿಳಿಸಿದರು.
      ಇದೇ ಸಂದರ್ಭದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಸ್ಥಳದಲ್ಲಿ ಕೂಲಿಕಾರರಿಗೆ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಯಿತು. ಸದರಿ ಶಿಬಿರದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು, ಕೂಲಿಕಾರರು ಆರೋಗ್ಯ ತಪಾಸಣೆ ಮಾಡಿ ಮಧುಮೇಹ, ರಕ್ತದೊತ್ತಡ ಪರೀಕ್ಷೆ ಮಾಡಿ ಸಮಾಲೋಚನೆ ಮಾಡಿದರು.

      ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಶೈಲ ಬಿರಾದಾರ, ಎಂಐಎಸ್ ಸಂಯೋಜಕರು ಹನುಮಂತ ಮೇಟಿ, ತಾಂತ್ರಿಕ ಸಂಯೋಜಕ ಸಾಹಿಲ್ ದನಶೆಟ್ಟಿ, ಐಇಸಿ ಸಂಯೋಜಕ ರಾಮನಗೌಡ ಸರಬಡಗಿ, ತಾಂತ್ರಿಕ ಸಹಾಯಕ ಸಂಗಮೇಶ ಬಿರಾದಾರ ಮಾತನಾಡಿದರು.

      ಈ ಸಂದರ್ಭದಲ್ಲಿ ಡಿಇಒ ಜೀವನ ತೊರವಿ, ಬಿಲ್ ಕಲೆಕ್ಟರ್ ಗುರು ಹಕ್ಕಿ, ಗ್ರಾಮ ಕಾಯಕ ಮಿತ್ರ ಮಂಗಳಾ ಉತಾರೆ, ಮಂಜುನಾಥ ಮೇಲಿನಕೇರಿ, ಗ್ರಾಮದ ಮುಖಂಡರು, ಸ್ವ ಸಹಾಯ ಸಂಘದ ಸದಸ್ಯರು, ಕಾಯಕ ಬಂಧುಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಇದ್ದರು.

      ಇಂಡಿ: ತಾಲೂಕಿನ ಮಾವಿನಳ್ಳಿ ಗ್ರಾಮದ ಮರಗಾ ಲಕ್ಷ್ಮಿ ದೇವಸ್ಥಾನ ಆವರಣದಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಚಟುವಟಿಕೆ ಅಡಿ ಮಹಿಳಾ ಸ್ವಸಹಾಯ ಗುಂಪುಗಳಿಗೆ ಹಾಗೂ ಕಾಯಕ ಬಂಧುಗಳು, ಅಕುಶಲ ಕೂಲಿಕಾರರಿಗೆ ಜಾಗೃತಿ ಅಭಿಯಾನದ ಕರಾ ಪತ್ರವನ್ನು ಮಾಹದೇವಪ್ಪ ಏವೂರ ವಿತರಿಸಿದರು.

      Tags: #indi / vijayapur#Public News#State News#Today News#Top priority to providing continuous wage employment under the VB-G Ram Ji scheme: Mahadeva Evur#Voice Of Janata#Voiceofjanata.in#ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      August 7, 2026
      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      August 7, 2026
      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      August 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.