ನಿಮ್ಮ ಬೈಕ್ ಕಳುವಾಗಿದೆಯೇ..? ಅ.19ರಂದು ಇಂಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ..
ಇಂಡಿ: ಇಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಮುಟ್ಟುಗೋಲು ಹಾಕಿಕೊಂಡಿರುವ ವಿವಿಧ ಮಾದರಿಯ ದ್ವಿಚಕ್ರ ವಾಹನಗಳನ್ನು ವಾರಸುದಾರರಿಗೆ ಹಸ್ತಾಂತರಿಸುವ ಉದ್ದೇಶದಿಂದ ಅ.19ರಂದು ಬೆಳಿಗ್ಗೆ 11 ಗಂಟೆಗೆ ಇಂಡಿ ಪೊಲೀಸ್ ಠಾಣೆಯ ಆವರಣದಲ್ಲಿ ಅಪರಾಧ ನಿರೀಕ್ಷಕರ ನೇತೃತ್ವದಲ್ಲಿ ಪತ್ತೆ ಪರೇಡ್ ನಡೆಸಲಾಗುವುದು ಎಂದು ಇಂಡಿ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.
ಈ ಪತ್ತೆ ಪರೇಡ್ನಲ್ಲಿ ಭಾಗವಹಿಸುವ ಸಂತ್ರಸ್ತರು ಹಾಗೂ ವಾರಸುದಾರರು ಅ.17ರಂದು ಸಂಜೆ 5 ಗಂಟೆಯೊಳಗೆ ಇಂಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ ತಮ್ಮ ವಾಹನಗಳ ಕುರಿತು ಮಾಹಿತಿ ನೀಡಿ, ವಾಹನಗಳನ್ನು ಗುರುತಿಸಲು ಸಹಕರಿಸಬೇಕು ಎಂದು ಸೂಚಿಸಲಾಗಿದೆ.
ಇಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳವು ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ತಮ್ಮ ವಾಹನಗಳನ್ನು ಕಳೆದುಕೊಂಡಿರುವ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಇಂಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಪೊಲೀಸ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.
















