ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆ
ಇಂಡಿ: ತಾಲೂಕು ಆಡಳಿತದ ವತಿಯಿಂದ ನವೆಂಬರ್ 11ರಂದು ವೀರವನಿತೆ ಒನಕೆ ಓಬವ್ವ ಜಯಂತಿ ಹಾಗೂ ನವೆಂಬರ್ 27ರಂದು ಕನಕ ಜಯಂತಿ ಆಚರಿಸುವ ಕುರಿತು ತಾಲೂಕು ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರ ಸಲಹೆ ಮತ್ತು ಸೂಚನೆಗಳನ್ನು ಆಲಿಸಲಾಯಿತು. ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸುವ ಕುರಿತು ಚರ್ಚಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಉಪತಹಶೀಲ್ದಾರ ಎಸ್.ಆರ್. ಮುಜಗೊಂಡ ವಹಿಸಿದ್ದರು. ಕಾರ್ಯಕ್ರಮದ ನಿರೂಪಣೆ ಹಾಗೂ ವಂದನಾರ್ಪಣೆಯನ್ನು ಸಂತೋಷ ಹೋಟಗಾರ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.










