ಕೇಂದ್ರ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ.
ಸಿಂಧನೂರು:ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಒಬ್ಬ ಭಿಕ್ಷಾಟನೆ ಮಾಡಿ ಜೀವನ ನಡೆಸುತ್ತಿದ್ದ. ವ್ಯಕ್ತಿಯ ಶವ ನೋಡಿದ ಕೇಂದ್ರ ಬಸ್ ನಿಲ್ದಾಣದ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪೊಲೀಸ್ ಇಲಾಖೆಗೆ ದೂರವಾಣಿ ಮೂಲಕ ಮಾಹಿತಿ ತಿಳಿಸಿದ್ದಾರೆ.
ನಗರ ಪೊಲೀಸ್ ಠಾಣೆಯ ASI ರಾಮಪ್ಪ ಮತ್ತು ಸಿಬ್ಬಂದಿಗಳೊಂದಿಗೆ ಕೇಂದ್ರ ಬಸ್ ನಿಲ್ದಾಣಕ್ಕೆ ಬಂದು ಶವವನ್ನು ತೆಗೆದುಕೊಂಡು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗಲಾಗಿದೆ.ಇದುವರೆಗೂ ಮೃತಪಟ್ಟ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ತಿಳಿದುಬಂದಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..