VOJ ನ್ಯೂಸ್ ಡೆಸ್ಕ್: ಯೋಗಿ ಆದಿತ್ಯನಾಥ್ ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ದಿನಾಂಕ ನಿಗದಿಯಾಗಿದೆ.
ಯೋಗಿ ಆದಿತ್ಯನಾಥ್ ರವರು ಎರಡನೇ ಬಾರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ದಿನಾಂಕ ಫಿಕ್ಸ್ ಆಗಿದೆ.
ಮಾರ್ಚ್ 25 ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸಂಜೆ 4 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಈ ಸ್ಟೇಡಿಯಂನಲ್ಲಿ ಸೇರುವ ಸಾಧ್ಯತೆಯಿದೆ. ಸಾವಿರ ಪಲಾನುಭವಿಗಳು, 200 ವಿವಿಐಪಿ ಗಣ್ಯರಿಗೆ ಆಮಂತ್ರಣವನ್ನು ನೀಡಲಾಗಿದೆ.
ಯೋಗಿ ಆದಿತ್ಯನಾಥ್ ಪ್ರಮಾಣವಚನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅಡಳಿತ ರಾಜ್ಯದ ಮುಖ್ಯಮಂತ್ರಿಗಳು, ಕೇಂದ್ರದ ಪ್ರಮುಖ ಮಂತ್ರಿಗಳು ಸೇರಿದಂತೆ ಬಿಜೆಪಿಯ ಅನೇಕ ನಾಯಕರುಗಳು ಭಾಗವಹಿಸಲಿದ್ದಾರೆ.



















