ಚಿಕ್ಕಬಳ್ಳಾಪುರ: ಭಾರೀ ನಿರೀಕ್ಷೆ ಹುಟ್ಟಿಸಿರುವ ನಿರ್ದೇಶಕ ರಾಜ ಮೌಳಿ ನಿರ್ದೇಶನದ ಆರ್ ಆರ್ ಆರ್ ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮ ಚಿಕ್ಕಬಳ್ಳಾಪುರದಲ್ಲಿ ಅದ್ದೂರಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮುಖ್ಯ ಅತಿಥಿಯಾಗಿದ್ದರು.
ಚಿತ್ರದ ನಾಯಕ ನಟ ಜೂನಿಯರ್ ಎನ್ ಟಿ ಆರ್, ರಾಮ್ ಚರಣ್ ತೇಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅಲ್ಲದೆ ಕನ್ನಡದ ಹಿರಿಯ ನಟ ಶಿವರಾಜ್ ಕುಮಾರ್ ಕಾರ್ಯಕ್ರಮದಲ್ಲಿ ಎಲ್ಲರ ಆಕರ್ಷಣೆಯಾಗಿದ್ದರು.