ರಾಯಚೂರು : ಸರ್ಕಾರದ ಆದೇಶದಂತೆ 2021-22ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ತೊಗರಿ ಉತ್ಪನ್ನವನ್ನು ಪ್ರತಿ ಎಕರಿಗೆ ಗರಿಷ್ಠ 7.5 (ಏಳುವರೆ) ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ತೊಗರಿಯನ್ನು ಪ್ರತಿ ಕ್ವಿಂಟಾಲ್ಗೆ ಉತ್ಪನ್ನ 6300/- ರೂ.ಗಳಂತೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸಲಾಗುವುದು.
ಈಗಾಗಲೇ ನೋಂದಣಿ ಪ್ರಕ್ರಿಯ ಜಾರಿಯಲ್ಲಿದ್ದು, ರೈತರ ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗಧಿಪಡಿಸಿದೆ.
ರೈತ ಬಾಂಧವರು ಫ್ರೂಟ್ಸ್ ಐ.ಡಿಯೊಂದಿಗೆ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿ ತೊಗರಿ ಮಾರಾಟ ಮಾಡಿ ಸರ್ಕಾರದ ಯೋಜನೆಯ ಸದುಪಯೋಗ ಪಡೆಯಲು ಕೋರಲಾಗಿದೆ.
ಕೋವಿಡ್-19ರ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾ ಟಾಸ್ಕಾ ಪೋರ್ಸ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ.ಅವಿನಾಶ್ ರಾಜೇಂದ್ರ ಮೆನನ್ ಅವರು ತಿಳಿಸಿದ್ದಾರೆ.