VOJ ನ್ಯೂಸ್ ಡೆಸ್ಕ್: ಬೇಸಿಗೆ ಆರಂಭವಾಗುತ್ತಿದ್ದಂತೆ ಪ್ರತಿ ವರ್ಷ ಕೆಲ ಜಿಲ್ಲೆಗಳ ಸರ್ಕಾರಿ ಕಚೇರಿಗಳ ಸಮಯವನ್ನು ಬದಲಾವಣೆ ಮಾಡಲಾಗುತ್ತಿತ್ತು. ಆದರೆ ಈ ವರ್ಷ ಸರ್ಕಾರಿ ಕಚೇರಿಗಳ ಸಮಯವನ್ನು ಯಥಾವತ್ತಾಗಿ ಮುಂದುವರೆಸಲು ಸರ್ಕಾರ ಆದೇಶಿಸಿದೆ.
ಬೇಸಿಗೆಯ ತೀವ್ರತೆಯ ಕಾರಣದಿಂದಾಗಿ
ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ವಿಭಾಗದ ಜಿಲ್ಲೆಗಳ ಕಚೇರಿಯ ಕೆಲಸದ ಸಮಯವನ್ನು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯ ವರೆಗೆ ಬದಲಾಯಿಸುವಂತೆ ಕೋರಲಾಗಿತ್ತು. ಆದರೆ ದೆಹಲಿಯಲ್ಲಿ ಕಲಬುರಗಿಂತ ಹೆಚ್ಚಿನ ತಾಪಮಾನವಿದ್ದರೂ, ಅಲ್ಲಿಯ ಕಚೇರಿಗಳ ಕೆಲಸದ ಸಮಯವನ್ನು ಬದಲಾವಣೆ ಮಾಡಿರುವುದಿಲ್ಲ. ಆದ್ದರಿಂದ ಇನ್ನು ಮುಂದೆಯೂ ಸಹ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಬೇಸಿಗೆಯ ತೀವ್ರತೆಯ ಕಾರಣ ಕಚೇರಿ ಕೆಲಸದ ಸಮಯವನ್ನು ಬದಲಾವಣೆ ಮಾಡುವುದು ಅಗತ್ಯವಿಲ್ಲವೆಂದು ಸರ್ಕಾರ ಆದೇಶ ಹೊರಡಿಸಿದೆ.