ಸಿರುಗುಪ್ಪ: ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಗ್ಯಾಸ್ ಸಿಲೆಂಡರ್ ಹಾಗೂ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಸಿರಗುಪ್ಪ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬಿ.ಎಂ. ನಾಗರಾಜ ಹಾಗೂ ಚಂದ್ರಯ್ಯ ಸ್ವಾಮಿ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಕೇಂದ್ರ ಸರ್ಕಾರದ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್
ಅಧ್ಯಕ್ಷರಾದ ಬಿ.ವಿ. ಶಿವಯೋಗಿ, ಸಿರುಗುಪ್ಪ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಎನ್. ಕರಿಬಸಪ್ಪ, ತೆಕ್ಕಲಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ
ನಾಗರುದ್ರ ಗೌಡ’ ಯುವ ಕಾಂಗ್ರೆಸ್ ನ ಅಧ್ಯಕ್ಷರುಗಳು ಪದಾಧಿಕಾರಿಗಳು ಮುಖಂಡರು ಕಾರ್ಯಕರ್ತರು
ಪಾಲ್ಗೊಂಡಿದ್ದರು.