VOJ ನ್ಯೂಸ್ ಡೆಸ್ಕ್: ಬಿಜೆಪಿಯ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಉಡುಪಿಯ ವಸತಿ ಗೃಹವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇಕಡ 40 % ಕಮಿಷನ್ ಆರೋಪ ಹೊರಿಸಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಇದೀಗ ಕಮಿಷನ್ ಆರೋಪ ಹೊಸ ತಿರುವನ್ನು ಪಡೆದುಕೊಂಡಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ.
ಇನ್ನು ಕಾಂಗ್ರೆಸ್ನ ಕೆಪಿಸಿಸಿ ಅಧ್ಯಕ್ಷ
ಡಿಕೆ ಶಿವಕುಮಾರ್ ಅವರು ಈಶ್ವರಪ್ಪ ವಿರುದ್ಧ 302 ಅಡಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.