ಸಿಂಧನೂರು:ನಗರದ ಬಿಜೆಪಿ ಕಾರ್ಯಾಲಯದಲ್ಲಿ ಭಾರತದ ಸ್ವಾತಂತ್ರ್ಯ ನಂತರ ದೇಶೀಯ ಮತ್ತು ವಿದೇಶಿ ನೀತಿಗಳಿಗೆ ಸ್ಪಷ್ಟ ರೂಪ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದ ಧೀಮಂತ ನಾಯಕ, ಅಜಾತಶತ್ರು, ಮಾಜಿ ಪ್ರಧಾನಮಂತ್ರಿ ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನವನ್ನು ಸುಶಾಸನ ದಿನವಾಗಿ ಬಿಜೆಪಿ ಕಾರ್ಯಾಲಯದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಧ್ವರಾಜ್ ಆಚಾರ್ಯ ಅವರು ಅಜಾತಶತ್ರು ಮಾಜಿ ಪ್ರಧಾನಮಂತ್ರಿ ದಿ.ಅಟಲ್ ಬಿಹಾರಿ ವಾಜಪೇಯಿ ಅವರು ಪಕ್ಷವನ್ನು ಕಟ್ಟಿ ಬೆಳಸಿದ್ದಾರೆ.ಅವರ ಜೀವನ ಶೈಲಿಯನ್ನು ಎಲ್ಲರೂ ರೂಡೀಸಿಕೊಳ್ಳಬೇಕು.ದೇಶಕ್ಕೆ ಅಟಲ್ ಜೀ ಯವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.
ಈ ವೇಳೆ ಬಿಜೆಪಿ ಪಕ್ಷದ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.