ಲಿಂಗಸೂಗೂರು: ಬಿಜೆಪಿ ಕಾರ್ಯಾಲಯದಲ್ಲಿ ನಡೆದ ತಾಲೂಕು ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಇತ್ತೀಚೆಗೆ ಜೆಡಿಎಸ್ ತೊರೆದು ಬಿಜೆಪಿ ಗೆ ಸೇರ್ಪಡೆಗೊಂಡ ಪುರಸಭೆ ಅಧ್ಯಕ್ಷ ಸುನೀತಾ ಕೆಂಭಾವಿ ಹಾಗೂ ಮಾಜಿ ಅಧ್ಯಕ್ಷರಾದ ಗದ್ದೆಮ್ಮ ಯಮನೂರ್ ಹಾಗೂ ಗೌರವ ಡಾಕ್ಟರೇಟ್ ಪದವಿ ಪಡೆದ ರಾಯಚೂರು ಜಿಲ್ಲಾ ಅಧ್ಯಕ್ಷರಾದ ವಿಜಯರಾಜೇಶ್ವರಿ ಗೋಪಶೆಟ್ಟಿ ಹಾಗೂ United nation international peace council ಅವರು ನೀಡಿರುವ Global best social worker award ಗೆ ಭಾಜನರಾದ ಜ್ಯೋತಿ ಸುಂಕದ ಇವರಿಗೆ ತಾಲೂಕ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಸಕ್ರಿ ಅವರು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲೂಕು ಮಹಿಳಾ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.


















