ವಿಜಯಪುರ: ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಯಾರೇ ಪ್ರಚೋದನಕಾರಿ ಹೇಳಿಕೆ ನೀಡಿದರೆ ಕಠಿಣ ಕ್ರಮ ಕೈಗೊಳ್ಳುವುದು ಎಂದು ವಿಜಯಪುರದಲ್ಲಿ ಎಸ್ಪಿ ಆನಂದಕುಮಾರ ಎಚ್ಚರಿಸಿದರು.
ಜಿಲ್ಲೆಯ ಎಲ್ಲ ಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಯಾರೂ ಪ್ರಚೋದನಕಾರಿ ಪೋಸ್ಟ್ ಮಾಡಬಾರದರು. ಈಗಾಗಲೇ ಸೋಶಿಯಲ್ ಮೀಡಿಯಾ ನಿಯಂತ್ರಣ ಘಟಕ ಸ್ಥಾಪಿಸಲಾಗಿದ್ದು ಆ ಮೂಲಕ ನಿಗಾ ಇರಿಸಲಾಗಿದೆ. ಯಾರೇ ಕೋಮು ಸೌಹಾರ್ದ ಕೆಡಿಸಲು ಮುಂದಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.