ವಿಜಯಪುರ : ಮಹಾರಾಷ್ಟ್ರದಲ್ಲಿ ಸರ್ಕಾರ ಮಾಡಿದ್ದೇ ತಪ್ಪಾಗಿದೆ ಎಂದು ವಿಜಯಪುರದಲ್ಲಿ ಸಚಿವ ಮುರುಗೇಶ ನಿರಾಣಿ ಹೇಳಿದಯ. ಕಾಂಗ್ರೆಸ್, ಎನ್ ಸಿ ಪಿ ಹಾಗೂ ಶಿವಸೇನೆ ಕೋಮಾದಲ್ಲಿರುವ ಸರ್ಕಾರ ಆಗಿದೆ. ಇದು ಬಹಳ ದಿನ ನಡೆಯೋದಿಲ್ಲ ಎಂಬುದು ಗೊತ್ತಿತ್ತು. ಆ ಸರ್ಕಾರ ಇಲ್ಲಿಯ ವರೆಗೂ ನಡೆದಿದ್ದೇ ದೊಡ್ಡ ವಿಷಯ ಎಂದರು. ಅಲ್ಲದೇ, ಮಹಾರಾಷ್ಟ್ರದಲ್ಲಿ ಒಬ್ಬರ ಬಳಿ ಸ್ಟೇರಿಂಗ್, ಒಬ್ಬರ ಬಳಿ ಬ್ರೇಕ್, ಒಬ್ಬರ ಬಳಿ ಎಕ್ಸಲೇಟರ್ ಎಂಬಂತಾಗಿದೆ. ಹಾಗಾಗಿ ಅವರೆಲ್ಲ ಸೇರಿ ಸರ್ಕಾರ ನಡೆಸಿದ್ದೇ ತಪ್ಪಾಗಿದೆ ಎಂದರು.
ಅಲ್ಲದೇ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯ ಮಾಡಿದರು. ಎಚ್ಡಿಕೆ ಕನಸು ಕಾಣೋದರಲ್ಲಿ ತಪ್ಪೇನಿಲ್ಲ. ರಾಜಕಾರಣ ಮಾಡುವವರು ಕನಸು ಕಾಣಲಿ. ಅಲ್ಲದೇ, ಅವರಿಗೆ ದೇವರು ಅವರಿಗೆ ಒಳ್ಳೇದು ಮಾಡಲಿ ಎಂದರು.