ಇಂಡಿ : ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ಕೆಸರುಮಯವಾಗಿವೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೇಮಸಳಿ ಬಸ ನಿಲ್ದಾಣದಲ್ಲಿ ಪಂಚಾಯತಿ ಹಾಗೂ ಗ್ರಂಥಾಲಯ ಮುಂದೆಯೆ ಕೆಸರಿದಿಂದ ಜನತೆ ಓಡಾಟ ಮಾಡಲು ಹೈರಾಣಾಗಿದ್ದಾರೆ. ಅಲ್ಲದೇ, ವಾಹನ ಸವಾರು ಓಡಾಟಕ್ಕೂ ತೊಂದರೆ ಆಗುತ್ತಿದೆ. ಅದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.