ಲಿಂಗಸೂಗೂರು: ತಾಲೂಕಿನ ಗಡಿ ಗ್ರಾಮವಾದ ತೊಂಡಿಹಾಳ ಗ್ರಾಮದಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮ ಜರುಗಿತು. ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗುವ ಮೂಲಕ ಹಟ್ಟಿ ಚಿನ್ನದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಾನಪ್ಪ ಡಿ ವಜ್ಜಲ್ ಚಾಲನೆ ನೀಡಿದರು.
ಈ ವೇಳೆ ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಮಾನಪ್ಪ ಡಿ ವಜ್ಜಲ್ ಮಾತನಾಡಿ ಸರ್ಕಾರದ ಯೋಜನೆಗಳನ್ನು ಜನರು ಸದುಪಯೋಗ ಪಡಿಸಿಕೊಳ್ಳಬೇಕು. ಈ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ
ನಡೆಯುತ್ತಿರುವದು ನನಗೆ ಖುಷಿ ತಂದಿದೆ. ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಜನರ ಸಮಸ್ಯೆಗಳನ್ನು ಚರ್ಚಿಸಲು ಇಲ್ಲಿ ಮುಕ್ತವಾದ ಅವಕಾಶವಿದ್ದು, ಸಮಸ್ಯೆಗಳನ್ನು ಹೇಳಿಕೊಳ್ಳಲು ಅವಕಾಶವಿದೆ. ಮಹಿಳೆಯರಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಹಲವಾರು ಯೋಜನೆಗಳಿವೆ. ಅವುಗಳನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕು. ಇನ್ನು ರೈತರು ಹಾಗೂ ಕೂಲಿ ಕಾರ್ಮಿಕರು ನಿಮ್ಮ ಸಮಸ್ಯೆಗಳನ್ನು ತಹಶೀಲ್ದಾರರಿಗೆ ಹೇಳಿ ಪರಿಹಾರ ಕಂಡುಕೊಳ್ಳಿ. ವಸತಿ ಯೋಜನೆಯ ಮನೆಗಳನ್ನು ಪ್ರಾಮಾಣಿಕವಾಗಿ ನಿಜವಾದ ಫಲಾನುಭವಿಗಳಿಗೆ ಹಂಚಿಕೆ ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದರು.
ಈ ಸಂದರ್ಭದಲ್ಲಿ ಕಂದಾಯ, ಆರೋಗ್ಯ, ಪೊಲೀಸ್, ಶಿಕ್ಷಣ, ಅಬಕಾರಿ, ತಾ.ಪಂ. ಶಿಶು ಅಭಿವೃದ್ಧಿ, ಕೃಷಿ, ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಸುತ್ತಮುತ್ತಲಿನ ಗ್ರಾಮಗಳ ಜನರು ಇದ್ದರು.