ಅಫಜಲಪುರ:- ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಪಟ್ಟಣದಲ್ಲಿ ಅತಿ ಶೀಘ್ರದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಪದಾಧಿಕಾರಿಗಳ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗುವುದು ಆದ್ದರಿಂದ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘಟನೆಯ ಗೌರವ ಅಧ್ಯಕ್ಷರಾದ ರವಿ ಬಡಿಗೇರ್ ಹಾಗೂ ಅಧ್ಯಕ್ಷರಾದ ಶ್ರೀಶೈಲ್ ಸಿಂಗೆ ಅವರು ಮಾತನಾಡಿ ತಿಳಿಸಿದರು.
ಈ ಒಂದು ಸಂದರ್ಭದಲ್ಲಿ ಸಂಘಟನೆಯ ಖಜಾಂಚಿ ರಾಹುಲ್ ಅಣ್ಣನವರ್, ಸಂಘಟನಾ ಕಾರ್ಯದರ್ಶಿ ರವಿ ಗುಂಡಗುರ್ತಿ ಹಾಗೂ ಕಾರ್ಯದರ್ಶಿಗಳಾದ ಪ್ರಶಾಂತ್ ಮ್ಯಾಕೆರಿ ಮತ್ತು ಪದಾಧಿಕಾರಿಗಳು ಭಾಗಿಯಾಗಿದ್ದರು.