ಲಿಂಗಸೂಗೂರು:ರಾಯಚೂರ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುರುಗುಂಟಾ ಗ್ರಾಮದ ಎಸ್.ಟಿ ಸಮುದಾಯದ ಮಹಿಳೆ ಮತ್ತು ಮಕ್ಕಳ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.ಮುಸ್ಲಿಂ ಸಮುದಾಯದ ಯುವಕರು ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಗುರುವಾರ ರಾತ್ರಿ 7.30 ವೇಳೆಗೆ 9 ಜನರ ಗುಂಪು ಪರಿಶಿಷ್ಟ ಪಂಗಡ ಜನಾಂಗದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ.ಹಲ್ಲೆಗೆ ಒಳಗಾದ ಮಹಿಳೆಯರು ಹಟ್ಟಿಚಿನ್ನದ ಗಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಈಗಾಗಲೇ ಅಟ್ರಾಸಿಟಿ ಕೇಸು ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.ಪ್ರಕರಣ ದಾಖಲಾದರೂ ಆರೋಪಿಗಳ ಬಂಧನವಾಗಿಲ್ಲ. ಕೂಡಲೇ ಆರೋಪಿಗಳನ್ನು ಬಂಧಿಸಲು ಮಹಿಳೆಯರು, ಸಂಘಟನೆಯ ಮುಖಂಡರು ಆಗ್ರಹಿಸಿದ್ದಾರೆ.