ಅಫಜಲಪುರ: ಕಲಬುರಗಿ ಜಿಲ್ಲೆಯ ಅಫಜಲಪುರದ ಸಿದ್ದಲಿಂಗೇಶ್ವರ ಸಂಸ್ಥಾನ ಹಿರೇಮಠದ ಶ್ರೀಗಳ ಮಠದ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿ, ಶ್ರೀಗಳ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ತಡರಾತ್ರಿ ನಡೆದಿದೆ.
ಕಿಡಿಗೇಡಿಗಳು ನಿನ್ನೆ ರಾತ್ರಿ ಮಠದ ಮೇಲೆ ದಾಳಿ ಮಾಡಿ ಕಿಟಕಿಯ ಗ್ಲಾಸ್ಗಳನ್ನು ಹೊಡೆದು ಹಾಕಿದ್ದಾರೆ.ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.ಇನ್ನು ಪೊಲೀಸರು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.