ಜನವರಿ. 21ಕ್ಕೆ ಬೂತ್ ವಿಜಯ ಸಂಕಲ್ಪ ಅಭಿಯಾನ.. ಅಧ್ಯಕ್ಷ ಕೂಚಬಾಳ್..
ವಿಜಯಪುರ ಜಿಲ್ಲೆಯಲ್ಲಿ ಬೂತ್ ಮಟ್ಟದ ವಿಜಯ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜನವರಿ. 21 ರಂದು ರಾಷ್ಟ್ರೀಯ ನಾಯಕ ಜೆ.ಪಿ ನಡ್ಡಾ ಕಾರ್ಯಕ್ರಮ ಉದ್ಘಾಟಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ಹೇಳಿದರು.
ವಿಜಯಪುರ ನಗರದಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9.30 ಕ್ಕೆ ಜ್ಞಾನಯೋಗಾಶ್ರಮದಲ್ಲಿ ಲಿಂಗೈಕ್ಯ ಸಿದ್ಧೇಶ್ವರ ಶ್ರೀಗಳ ದರ್ಶನ ಮುಗಿಸಿ ನಾಗಠಾಣ ಕ್ಷೇತ್ರದಲ್ಲಿ ಮನೆ ಮನೆಗೆ ಭೇಟಿ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತದೆ. ತದನಂತರ 12 ಕ್ಕೆ ಸಿಂದಗಿಯಲ್ಲಿ ಸುಮಾರು ಐವತ್ತು ಸಾವಿರ ಜನರನ್ನು ಸೇರಿಸಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದರು.