ಚಡಚಣ : ಹಾಡಹಗಲೇ ತೋಟದ ಮನೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಬರಡೋಲ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ನಡೆದಿದೆ. ರೈತ ಮಹಾದೇವ ಚೌದರಿ ಎಂಬುವವರ ಮನೆಯಲ್ಲಿ ಕಳ್ಳತನ ಆಗಿದೆ. ಇನ್ನೂ ಮನೆಯಲ್ಲಿದ್ದ 4 ತೊಲಿ ಚಿನ್ನದ ಬಳೆ, 1 ತೊಲಿ ಚಿನ್ನದ ಸರ ಹಾಗೂ 40 ಸಾವಿರ ಹಣ ಕಳ್ಳತನ ಮಾಡಿದ್ದಾರೆ. ಕುಟುಂಬದವರೆಲ್ಲ ಮನೆ ಹಿಂದೆ ತೋಟದ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಮನೆಯಲ್ಲಿ ಕಳ್ಳತನಗೈದು ಪರಾರಿಯಾಗಿದ್ದಾರೆ. ಚಡಚಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.