ಇಂಡಿ : ಜಮೀನಿನಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ನಿಂದ ಅಪಾರ ಪ್ರಮಾಣದ ಕಬ್ಬು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೇಮಸಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಹಣಮಂತ ಮಾಶ್ಯಾಳ 4 ಎಕರೆ, ಪಿರಪ್ಪ ಮಾಶ್ಯಾಳ 3 ಎಕರೆ ಶಾರ್ಟ್ ಸರ್ಕ್ಯೂಟ್ನಿಂದ ಕಬ್ಬು ಸುಟ್ಟು ಹೋಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸಿದರು. ಸಮಾರು 10 ಲಕ್ಷದಷ್ಟು ಕಬ್ಬು ಬೆಂಕಿಗಾಹುತಿ ಆಗಿದೆ. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.