ರಾಯಚೂರು: ಬುಲೆರೋ ವಾಹನ ಹಾಗೂ ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
ನೂರುಸ್ ರಂಗ್ರೇಜ್ (40) ಸ್ಥಳದಲ್ಲೇ ಸಾವನ್ನಪ್ಪಿರುವ ಬೈಕ್ ಸವಾರ.ದುರ್ಘಟನೆಯಲ್ಲಿ ನೂರುಸ್ ಪತ್ನಿ ಜ್ಯೋತಿ ಬಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರನ್ನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ದಂಪತಿ ಸ್ಕೂಟಿಯಲ್ಲಿ ಮನೆಗೆ ವಾಪಸ್ ಆಗುತ್ತಿದ್ದಾಗ ದುರ್ಘಟನೆ ನಡೆದಿದೆ. ಅಪಘಾತದ ನಂತರ ಬುಲೆರೋ ಚಾಲಕ ವಾಹನ ಬಿಟ್ಟು ಪರಾರಿ ಆಗಿದ್ದಾನೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.