ವಿಜಯಪುರ : ಉತ್ತರ ಕರ್ನಾಟಕ್ಕೆ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ. ಅಲ್ಲದೇ, ಬೆಳೆ ಹಾನಿಗೆ ಸರ್ಕಾರ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಆರೋಪಿಸಿದರು.
ವಿಜಯಪುರ ನಗರದಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ವಿಷಯದಲ್ಲಿ ಸರ್ಕಾರ ರಾಜಕೀಯ ಮಾಡುವುದು ಸರಿಯಲ್ಲ. ಅದಕ್ಕಾಗಿ ವಿಜಯಪುರ ಜಿಲ್ಲೆಗೆ ಫೆಬ್ರವರಿ 11ಕ್ಕೆ ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆ ಆರಂಭ ಆಗಲಿದೆ. ಅಂದು ಸಿಂದಗಿ, ಇಂಡಿ, ನಾಗಠಾಣ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆ ನಡೆಯಲಿದೆ.
ತದನಂತರ ಉಳಿದ ಮತಕ್ಷೇತ್ರಗಳಲ್ಲಿ 21, 22 ಪ್ರಜಾಧ್ವನಿ ಬಸ್ ಯಾತ್ರೆ ಮಾಜಿ ಸಿಎಮ್ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರಜಾಧ್ವನಿ ಬಸ್ ಯಾತ್ರೆ ನಡೆಯಲಿದೆ ಎಂದರು.