ಸಿಂಧನೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲುಕಿನ ಆರ್. ಹೆಚ್. ನಂ 3 ರ ಸರಕಾರ ಪ್ರೌಢ ಶಾಲೆಯಲ್ಲಿ ಮಕ್ಕಳ ಕೋವಿಡ್ ಲಸಿಕಾ ಅಭಿಯಾನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ್ ನಾಡಗೌಡ ಹಾಗೂ ತಾಲೂಕು ದಂಡಾಧಿಕಾರಿ ಮಂಜುನಾಥ ಭೋಗಾವತಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಶಾಸಕರು ಕಳೆದ ಎರಡೂ ಲಾಕ್ ಡೌನ್ ಜೊತೆಗೆ ಕರೋನ ಸೋಂಕಿನಿಂದ ಉಂಟಾದ ಸಾವುಗಳನ್ನು ಕಂಡರು ಜನರು ಜಾಗೃತಿ ವಹಿಸಿದೆ ನಿರ್ಲಕ್ಷ್ಯ ತೋರಿದ್ದಾರೆ. ಎರಡೂ ಡೋಸ್ ಲಸಿಕೆ ಪಡೆದವರು ಕರೋನಾ ಸೋಂಕಿಗೆ ಬಲಿಯಾಗಿಲ್ಲ. ಮತ್ತೆ ಮೂರನೇ ಅಲೆ ಬರುವ ಸಾಧ್ಯತೆ ಹೆಚ್ಚಾಗಿರುವದರಿಂದ ಮುನ್ನೆಚ್ಚರಿಕೆ ಕ್ರಮವಾಗಿ 15-18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಎಲ್ಲಾ ವಿಧ್ಯಾರ್ಥಿಗಳು ತಪ್ಪದೇ ಲಸಿಕೆ ಹಾಕಿಸಿಕೊಳ್ಳಬೇಕು ಎಂದರು.