ಇಂಡಿ : ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೇಮಸಳಿ ಕೆನಾಲ್‌ನಲ್ಲಿ ಸೋಮವಾರ ಪತ್ತೆಯಾಗಿದೆ. ಇನ್ನೂ ಪುರುಷನ ಶವ ಪತ್ತೆಯಾಗಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.