ಚಡಚಣ : ದಾಖಲೆ ಇಲ್ಲದ ಹಣ ಸೀಜ್ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಕೊಂಕಣಗಾಂವ ಚೆಕ್ ಪೊಸ್ಟ್’ನಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಸ್ವಿಪ್ಟ್ ಡಿಜೈರ್ ಕಾರಿನಲ್ಲಿ ಹಣ ಸಾಗಿಸುವಾಗ ತಪಾಸಣೆ ವೇಳೆ ಪತ್ತೆಯಾಗಿದೆ. ದಾಖಲೆ ಇಲ್ಲದೇ 4 ಲಕ್ಷ 40 ಸಾವಿರ ಹಣ ಪತ್ತೆಯಾಗಿದೆ. ಹಣ ವಶಕ್ಕೆ ಪಡೆದುಕೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಬೀದರ್ ಮೂಲದ ಅನಿಲ್ ಕುಮಾರ ರಾಠೋಡ (35) ವಶಕ್ಕೆ ಪಡೆಯಲಾಗಿದೆ. ಚಡಚಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.