ಲಿಂಗಸೂಗೂರು: ವಿಧಾನಸಭಾ ಚುನಾವಣೆಯ ರಂಗು ಎಲ್ಲೆಡೆ ಹೆಚ್ಚಾಗಿದೆ. ಕ್ಷೇತ್ರದಲ್ಲಿ ಶಾಂತಿಯುತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಭಾರತೀಯ ಪ್ಯಾರಾ ಮಿಲಿಟರಿ ಪಡೆಯ ಸೈನಿಕರನ್ನು ನಿಯೋಜಿಸಲಾಗಿದ್ದು, ನಾಗರಹಾಳ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಜೊತೆಗೂಡಿ ಪಥಸಂಚಲನ ನಡೆಸಿದರು.
ಚುನಾವಣೆ ಹತ್ತಿರ ವಾಗುತ್ತಿದ್ದಂತೆಯೇ ಅಭ್ಯರ್ಥಿಗಳು ತಮ್ಮದೇ ರೀತಿಯಲ್ಲಿ ಪ್ರಚಾರ ಕೆಲಸ ಆರಂಭಿಸಿದ್ದಾರೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದೇ ಇರಲಿ ಎಂದು ಚುನಾವಣಾ ಭದ್ರತೆಗಾಗಿ ಸೈನಿಕರನ್ನು ನಿಯೋಜಿಸಲಾಗಿದೆ.
ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸೈನಿಕರು ಮತ್ತು ಪೊಲೀಸರು ಪಥಸಂಚಲನ ಮಾಡುವ ಮೂಲಕ ಜನರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಿ ಜನರೊಂದಿಗೆ ನಾವಿದ್ದೇವೆ, ವಿಧಾನಸಭಾ ಚುನಾವಣೆಯಲ್ಲಿ ಮುಕ್ತವಾಗಿ ಪಾಲ್ಗೊಂಡು ಮತದಾನ ಮಾಡಿ ಎಂಬ ಸಂದೇಶವನ್ನು ರವಾನಿಸಿದರು.
ಇನ್ನು ಅರೆಸೈನಿಕ ಪಡೆಯ ಸೈನಿಕರು ಹಾಗೂ ಪೊಲೀಸ್ ಇಲಾಖೆಯ ಒಟ್ಟು 40 ಕ್ಕೂ ಅಧಿಕ ಸಿಬಂದಿಗಳು ಶಸ್ತ್ರಧಾರಿಗಳಾಗಿ ಪ್ರಮುಖ ರಸ್ತೆಗಳಲ್ಲಿ ರೂಟ್‌ಮಾರ್ಚ್ ನಡೆಸುವ ಮೂಲಕ ಸ್ಥಳೀಯರಲ್ಲಿ ಧೈರ್ಯ ತುಂಬುವ ಕೆಲಸ ಮಾಡಿದರು.
ವರದಿ: ವೀರೇಶ್ ಅರಮನಿ ವಾಯ್ಸ್ ಆಫ್ ಜನತಾ: