ವಿಜಯಪುರ : ಅಕ್ರಮವಾಗಿ ಮಾವಾ ಮಾರಾಟ ಮಾಡುವಾಗ ಪೊಲೀಸರು ದಾಳಿಗೈದು ಮಾವಾ ಜಪ್ತಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಲ್ಲಿ ನಡೆದಿದೆ. ಅರುಣ ನಾಟಿಕಾರ್, ಸಂಗಮೇಶ ಸಣ್ಣಕ್ಕಿ ವಿರುದ್ಧ ಕೇಸ್ ದಾಖಲಾಗಿದೆ. ಇನ್ನು 11,800 ಮೌಲ್ಯದ ಮಾವಾ ಹಾಗೂ 13,600 ನಗದು ಜಪ್ತಿಗೈದಿದ್ದಾರೆ. ಈ ಕುರಿತು ದೇವರಹಿಪ್ಪರಗಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ನಗರದಲ್ಲಿ ಎಸ್ಪಿ ಕಚೇರಿಯಿಂದ ರವಿವಾರ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ್ದಾರೆ.