ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ದಂಪತಿ ಸಾವು..!
ವಿಜಯಪುರ: ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಇಬ್ಬರು ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದ ರತ್ನಾಗಿರಿ ಬಳಿ ನಡೆದಿದೆ. ಶಾಹೀನಾ ವಾಲೀಕಾರ ಹಾಗೂ ಸಲೀಂ ವಾಲೀಕಾರ ಮೃತಪಟ್ಟಿರುವ ದಂಪತಿ. ರತ್ನಾಗಿರಿಯಿಂದ ವಿಜಯಪುರಕ್ಕೆ ಬರುತ್ತಿದ್ದ ವೇಳೆ ಸರ್ಕಾರಿ ಬಸ್ ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿದೆ. ಇದರಿಂದ ಸ್ಥಳದಲ್ಲಿಯೇ ಇಬ್ಬರೂ ಮೃತಪಟ್ಟಿದ್ದಾರೆ. ತಿಕೋಟಾ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.