ಸಕ್ಕರೆ ತುಂಬಿಕೊಂಡಿರುವ ಲಾರಿ ಪಲ್ಟಿ..! ಹೇಗಾಗಿದೆ ಗೊತ್ತಾ..?
ವಿಜಯಪುರ : ಪ್ಲಾಸ್ಟಿಕ್ ಚೀಲದಲ್ಲಿ ಸಕ್ಕರೆ ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ಅಪರಿಚಿತ ಲಾರಿ ಡಿಕ್ಕಿಯಾಗಿರುವ ಪರಿಣಾಮ ಲಾರಿಯೊಂದು ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ. ಇನ್ನು ತಮಿಳುನಾಡಿಗೆ ಸಕ್ಕರೆ ತೆಗೆದುಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿದೆ. ಅಲ್ಲದೇ, ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳು ಚಾಲಕ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿಡಗುಂದಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.