ಕೃಷ್ಣಾ ನದಿಗೆ ವ್ಯಕ್ತಿಯೋರ್ವ ಜಿಗಿದು ಆತ್ಮಹತ್ಯೆ..! ವಿಡಿಯೋ ಸಮೇತ
ವಿಜಯಪುರ: ಕೃಷ್ಣಾ ನದಿಗೆ ವ್ಯಕ್ತಿಯೋರ್ವ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ನಡೆದಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯ ಹೆಸರು ಹಾಗೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲ್ಹಾರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.