ಮೇ-18 ರಂದು ಶಾಸಕ ಮತ್ತು ಸಚಿವ ತಿಮ್ಮಾಪುರ ನೇತೃತ್ವದಲ್ಲಿ ಪೂರ್ವಭಾವಿ ಸಭೆ
ಇಂಡಿ : ರಾಜ್ಯ ಸರಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಠೆಯಲ್ಲಿ ಮೇ ೨೦ ರಂದು ಬೃಹತ್ ಸಮಾವೇಶ ನಡೆಯಲಿದೆ.
ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂದಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸುವರು.
ಈ ಕುರಿತು ಮಾನ್ಯ ಶಾಸಕ ಯಶವಂತರಾಯಗೌಡ ಪಾಟೀಲ ನೇತೃತ್ವದಲ್ಲಿ ಮೇ ೧೮ ರಂದು ಇಂಡಿಯ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಬೆಳಗ್ಗೆ ೯ ಗಂಟೆಗೆ ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.
ಈ ಸಭೆಗೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಮತ್ತು ಬೈಲಹೊಂಗಲ ಶಾಸಕ ಹಾಗೂ ಅಧ್ಯಕ್ಷರು ಹಣಕಾಸು ನಿಗಮದ ಮಹಾಂತೇಶ ಕೌಜಲಗಿ ಆಗಮಿಸುವರು..
ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಇಂಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೇದ ಮೋಮಿನ ತಿಳಿಸಿದ್ದಾರೆ.
ಫೋಟೋ ೧೫ ಇಂಡಿ ೦೩
ಜಾವೇದ ಮೋಮಿನ