ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?
ಇಂಡಿ : ಮಾರ್ಚ 25 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಒಬ್ಬ ವಿದ್ಯಾರ್ಥಿಯನ್ನು ಎಮ್ ಪಿ ಸಿ ಗೊಳಿಸಿದ್ದಾರೆ. ಹಾಗೂ ಕರ್ತವ್ಯದಲ್ಲಿ ನಿಷ್ಕಾಳಜಿತನ ತೋರಿಸಿದ ಶಿಕ್ಷಕ ಆರ್ ಜಿ ಬಂಡಿ ಅವರನ್ನು ಅಮಾನತು ಮಾಡಿ, ಶಿಸ್ತು ಕ್ರಮ ಕೈಗೊಳ್ಳುವಂತೆ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಕೋರಿದ್ದಾರೆ.
ಪಟ್ಟಣದ ಸಾಯಿ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ನಡೆದ ಎಸ್.ಎಸ್.ಸಿ ಕನ್ನಡ ಪರೀಕ್ಷೆಯಲ್ಲಿ ಕರ್ತವ್ಯದಲ್ಲಿ ನಿಷ್ಕಾಳಜಿತನ ತೋರಿಸಿದ ಕಾರಣ ತಾಲೂಕಿನ ಚೋರಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಾಜಶೇಖರ ಬಂಡಿ ಅವರನ್ನು ಕೂಡಲೇ ಅಮಾನತು ಗೊಳಿಸಬೇಕು. ಅದಲ್ಲದೇ ಒಬ್ಬ ವಿದ್ಯಾರ್ಥಿ ಯನ್ನು ಎಮ್ ಪಿ ಸಿ ಮಾಡಿದ ಘಟನೆ ನಡೆದಿದೆ.
ಸಾಯಿ ಪಬ್ಲಿಕ್ ಶಾಲೆಯ ಕೊಠಡಿ ಸಂಖ್ಯೆ ೧೦ ರಲ್ಲಿ ವಿದ್ಯಾರ್ಥಿ ಪರೀಕ್ಷಾ ಅಕ್ರಮದಲ್ಲಿ ತೊಡಗಿರುವುದು ಕಂಡುಬಂದಿದ್ದರಿಂದ ಎಂ.ಪಿ.ಸಿ ಮಾಡಿದ್ದಾರೆ.