ಇಂಡಿ: ಆಕಸ್ಮಿಕ ಬೆಂಕಿ ಅವಘಡದಿಂದಾಗಿ ಲಕ್ಷಾಂತರ ಮೌಲ್ಯದ ಕಬ್ಬು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಶಿರಗೂರ ಗ್ರಾಮದಲ್ಲಿ ನಡೆದಿದೆ. ಶಿವಾನಂದ ನಾವದಗಿ ಹಾಗೂ ಶುಭಾ ಪೂಜಾರಿ ಎಂಬುವರಿಗೆ ಸೇರಿದ ಸುಮಾರು 4 ಎಕರೆ ಕಬ್ಬು ಬೆಂಕಿಗಾಹುತಿ ಆಗಿದೆ.
ಬೆಂಕಿ ಅವಘಡ ರೈತರು ಬದುಕು ಬೀದಿಗೆ ಬಂದಿದೆ. ಅದಕ್ಕಾಗಿ ಸಂಬಂಧಿಸಿದ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯ ಮುಖಂಡರು, ರೈತರು ಆಗ್ರಹಿಸಿದರು. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.