ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ
ಅಫಜಲಪುರ: ಪಟ್ಟಣದ ತಾಲೂಕ ಪಂಚಾಯತ್ ಸಭಾಂಗಣದಲ್ಲಿ ತಾಲೂಕಾ ಕಾನೂನು ಸೇವಾ ಸಮಿತಿ, ತಾಲೂಕ ನ್ಯಾಯವಾದಿಗಳ ಸಂಘ ಹಾಗೂ ತಾಲೂಕ ಪಂಚಾಯತ್ ಕಾರ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂ ಕಾನೂನು ಅರಿವು–ನೆರವು ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿತು.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೌರವಾನ್ವಿತ ವಿನಾಯಕ ಮಾಯಣ್ಣ ಅವರು ಉದ್ಘಾಟಿಸಿದರು. ಸಿವಿಲ್ ನ್ಯಾಯಾಧೀಶರಾದ ಗೌರವಾನ್ವಿತ ಅನೀಲ ಅಮಾತೆ ಅವರು ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ತಹಸೀಲ್ದಾರ ಸಂಜೀವಕುಮಾರ ದಾಸರ, ತಾಲೂಕ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಈರಣ್ಣ ಕೌಲಗಿ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಕೀಲ ಮಂಜುನಾಥ ಡಿ. ಅವರು ಜೀತ ಪದ್ದತಿ ನಿರ್ಮೂಲನಾ ಕಾಯ್ದೆಯ ಕುರಿತು ಮಾಹಿತಿ ನೀಡುವ ಉಪನ್ಯಾಸ ನಡೆಸಿ, ಕಾರ್ಮಿಕರ ಹಕ್ಕುಗಳು ಮತ್ತು ಕಾನೂನು ರಕ್ಷಣೆಯ ಬಗ್ಗೆ ಅರಿವು ಮೂಡಿಸಿದರು.



















