ವಿಜಯನಗರ: ಶಾಟ್ ಸರ್ಕ್ಯೂಟ್ ನಿಂದ ಮನೆಯಲ್ಲಿದ್ದ ಎಸಿ ಸ್ಪೋಟವಾಗಿ ನಾಲ್ವರು ಸಜೀವವಾಗಿ ದಹನವಾಗಿರುವ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹಬ್ಬಿ ಮನೆಯಲ್ಲಿದ್ದ ಎ ಸಿ ಸ್ಫೋಟಗೊಂಡಿದ್ದು ನಾಲ್ವರು ಮೃತಪಟ್ಟಿದ್ದಾರೆ. ವೆಂಕಟ್, ಪ್ರಶಾಂತ್, ಕಲಾ, ಅರ್ದ್ವಿಕ್ ಎಂದು ಗುರುತಿಸಲಾಗಿದೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.