ರಾಯಚೂರು: ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ರಾಯಚೂರು ನಗರದ ಬಸವೇಶ್ವರ ಕಾಲೋನಿಯ ಕೆಬಿಜೆಎನ್ ಎಲ್ ಎಇಇ ಅಶೋಕ ರೆಡ್ಡಿ ಮನೆ ಮತ್ತು ಯಾದಗಿರಿಯ ಕದ್ರಾಪುರದ ಮನೆ ಮೇಲೆ ಎಬಿಸಿ ಡಿವೈಎಸ್ ಪಿ ವಿಜಯಕುಮಾರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಇನ್ನೂ ಎಸಿಬಿ ಅಧಿಕಾರಿಗಳು ದಾಖಲೆಗಳು ಪರಿಶೀಲನೆ ನಡೆಸಿದ್ದಾರೆ.
ರಾಯಚೂರು ಸೇರಿದಂತೆ ರಾಜ್ಯದ ವಿವಿದೆಡೆ ಅಕ್ರಮ ಆಸ್ತಿಗಳಿಕೆ ಆರೋಪ ಸಂಬಂಧ ಇಂದು ಬೆಳ್ಳಂಬೆಳ್ಳಗೆ ರಾಜ್ಯದ 18 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಸೇರಿದಂತೆ 400 ಕ್ಕೂ ಹೆಚ್ಚು ಅಧಿಕಾರಿ ಹಾಗೂ ಸಿಬ್ಬಂದಿಯಿಂದ 75 ಕಡೆಗಳಲ್ಲಿ ಎಸಿಬಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಮಾಡಿದ್ದಾರೆ. ಸಾರಿಗೆ ಇಲಾಖೆಯ ಹೆಚ್ಚುವರಿ ಪೊಲೀಸ್ ಆಯುಕ್ತರು ಸೇರಿದಂತೆ ವಿವಿಧ ಇಲಾಖೆಯ ಕಾರ್ಯನಿರ್ವಹಿಸುತ್ತಿರುವ 18 ಮಂದಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ನಡೆಸಿದೆ.