ಇಂಡಿ : ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಓರ್ವ ಸ್ಥಳದಲ್ಲಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಾಲೋಟಗಿ ರಸ್ತೆಯಲ್ಲಿ ರವಿವಾರ ನಡೆದಿದೆ. 37 ವರ್ಷದ ಪೈಗಂಬರ್ ಮಕಾಂದರ್ ಮೃತಪಟ್ಟಿರುವ ದುರ್ದೈವಿ. ಅಲ್ಲದೇ, ಮತ್ತೊಂದು ಬೈಕ್‌ನಲ್ಲಿದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.