ಬಬಲೇಶ್ವರ: ಚಲಿಸುತ್ತಿದ್ದ ಲಾರಿಯ ಟೈಯರ್ ಬ್ಲಾಸ್ಟ್ ಆಗಿರುವ ಪರಿಣಾಮ ಎರಡು ಎರಡು ಲಾರಿ ಮಧ್ಯೆ ಡಿಕ್ಕಿಯಾಗಿ ಓರ್ವ ಚಾಲಕ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾರಜೋಳ ಕ್ರಾಸ್ ಬಳಿ ಶುಕ್ರವಾರ ನಡೆದಿದೆ. ರಾಜಸ್ಥಾನ ಮೂಲದ ಪ್ರಭುಲಾಲ್ ಗುಜ್ಜಲ್ ಮೃತಪಟ್ಟಿರುವ ದುರ್ದೈವಿ. ಅಲ್ಲದೇ, ಮತ್ತೋರ್ವ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಬಲೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.