ಸಿಂದಗಿ : ಎರಡು ಬೈಕ್ ಗಳ ನಡುವೆ ಅಪಘಾತದಲ್ಲಿ ಮೂವರು ಗಾಯಗೊಂಡಿರುವ ಘಟನೆ
ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ. ಮುಂದೆ ಸಾಗುತ್ತಿದ್ದ ಟಿವಿಎಸ್ ಎಕ್ಸಲ್ ಬೈಕಿಗೆ ಹಿಂಬದಿಯಿಂದ ಬಂದ ಮತ್ತೊಂದು ಬೈಕ್ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಓರ್ವ ಮಹಿಳೆಯ ಕೈಗೆ ಪೆಟ್ಟಾಗಿದೆ. ಗಾಯಾಳಗಳನ್ನು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದರು. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.