ಚಡಚಣ : ಲಾರಿ ಹಾಗೂ ಟ್ರ್ಯಾಕ್ಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ ರಸ್ತೆಯಲ್ಲಿ ನಡೆದಿದೆ. ಇನ್ನೂ ಅಪಘಾತದಲ್ಲಿ ಎರಡು ವಾಹನಗಳು ಜಖಂಗೊಂಡಿವೆ. ಆದ್ರೇ, ಟ್ರ್ಯಾಕ್ಟರ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಇನ್ನೂ ಚಾಲಕನ ಹೆಸರು ತಿಳಿದುಬಂದಿಲ್ಲ. ಅಪಘಾತಕ್ಕೆ ಲಾರಿ ಚಾಲಕನ ಅತಿ ವೇಗವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.