ವಿಜಯಪುರ : ಬೈಕ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಅಸುನೀಗಿರುವ ಘಟನೆ ವಿಜಯಪುರ ನಗರದ ಐಓಸಿ ಪೆಟ್ರೋಲ್ ಪಂಪ್ ಬಳಿ ರವಿವಾರ ನಡೆದಿದೆ. ಮಹಾರಾಷ್ಟ್ರದ ಸೊಲ್ಲಾಪುರ ನಿವಾಸಿ 25 ವರ್ಷದ ವಿನೋದ ಮೃತಪಟ್ಟಿರುವ ದುರ್ದೈವಿ. ಅಲ್ಲದೇ, ಲಾರಿ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.