ಟಂಟಂ ಹಾಗೂ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ
ಇಂಡಿ : ಟಂಟಂ ಹಾಗೂ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ವೈಭವ ಡಾಬಾ ಬಳಿ ನಡೆದಿದೆ. ಟಂಟಂ ಹಾಗೂ ಕಾರಿನಲ್ಲಿದ್ದ ಒಂಬತ್ತು ಜನರ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಏಳು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂಡಿ ಶಹರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.