ಆಟೋ ರಿಕ್ಷಾ ಹಾಗೂ ಲಾರಿ ಮಧ್ಯೆ ಡಿಕ್ಕಿ,ಹಾಲಿನ ಪೌಡರ್ ಮೂಟೆಗಳು ಹಾನಿ..!
ವಿಜಯಪುರ: ಆಟೋ ರಿಕ್ಷಾ ಹಾಗೂ ಲಾರಿ ಮಧ್ಯೆ ಡಿಕ್ಕಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಅಪಘಾತದಲ್ಲಿಲಾರಿಯಲ್ಲಿದ ಹಾಲಿನ ಪೌಡರ ಮೂಟೆಗಳು ಹಾನಿ ಆಗಿದ್ದಾವೆ. ಘಟನೆಯಲ್ಲಿ ಇಬ್ಬರು ಚಾಲಕರು ಗಾಯಗೊಂಡಿದ್ದಾರೆ. ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.